ನಾಳೆಯಿಂದ ಶಾಲೆಗಳು ಓಪನ್ : ವಿದ್ಯಾರ್ಥಿಗಳಿಗೆ `ಕೆಎಸ್ಆರ್ ಟಿಸಿ’ ಗುಡ್ ನ್ಯೂಸ್
ಬೆಂಗಳೂರು : ಕೊರೊನಾ ಮೂರನೇ ಅಲೆಯ ಎಚ್ಚರಿಕೆಯ ಮಧ್ಯೆ ನಾಳೆಯಿಂದ ರಾಜ್ಯದಲ್ಲಿ ಶಾಲೆಗಳು ತೆರೆಯಲಿವೆ. ಮೊದಲ ಹಂತವಾಗಿ ನಾಳೆಯಿಂದ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿಯೊಂದನ್ನು ನೀಡಿದೆ.
ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ 500 ಕ್ಕೂ ಹೆಚ್ಚು ಬಸ್ ಗಳನ್ನು ಬಿಡಲು ನಿರ್ಧರಿಸಿದೆ. 9, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ, ಪ್ರಥಮ ಪಿಯುಸಿ ಶಾಲಾ-ಕಾಲೇಜುಗಳಿಗೆ ಹೋಗಿ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಮಯಕ್ಕೆ ಸರಿಯಾಗಿ ಬಸ್ ಗಳು ಸಂಚರಿಸಲಿವೆ. ಪ್ರತಿ ಡಿಪೆÇೀ ವ್ಯಾಪ್ತಿಯಲ್ಲಿ 20ರಿಂದ 25 ಬಸ್ ಗಳ ಕಾರ್ಯಾಚರಣೆ ನಡೆಸಲಿವೆ.
ಇತ್ತ ಬಿಎಂಟಿಸಿ ಕೂಡ ಮಕ್ಕಳನ್ನು ದೃಷ್ಠಿಯಲ್ಲಿಟ್ಟುಕೊಂಡು ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಇದಲ್ಲದೆ ವಿದ್ಯಾರ್ಥಿಗಳು 2020 -21 ನೇ ಸಾಲಿನ ಬಸ್ ಪಾಸ್, ಶಾಲಾ, ಕಾಲೇಜಿಗೆ ಸೇರಿದ ರಶೀದಿ, ಗುರುತಿನ ಚೀಟಿ ತೋರಿಸಿ ವಿದ್ಯಾರ್ಥಿಗಳು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.









