ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರ ಪತ್ರದಲ್ಲಿ ಜಿಟಿಡಿ ಪುತ್ರನ ಫೋಟೋ
ಮೈಸೂರು : ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಈಗಾಗಲೇ ಜೆಡಿಎಸ್ ಪಕ್ಷದಿಂದ ಒಂದು ಕಾಲನ್ನು ಹೊರಗಿಟ್ಟಿರುವುದು ಗೊತ್ತೇ ಇದೆ.
ಈ ಮಧ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಈ ಬೆಳವಣಿಗೆಗಳು ಜಿಟಿಡಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳಿಗೆ ಕಾರಣವಾಗಿತ್ತು.
ಇದೀಗ ಈ ಊಹಾಪೋಹಗಳಿಗೆ ಪುಷ್ಠಿ ನೀಡುವಂತಹ ಘಟನಾವಳಿಗಳು ಮೈಸೂರಿನಲ್ಲಿ ನಡೆಯುತ್ತಿವೆ.
ಹೌದು..! ಮೈಸೂರು ಮಹಾನಗರ ಪಾಲಿಕೆಯ 36ನೇ ವಾರ್ಡ್ ನ ಉಪಚುನಾವಣೆ ಸೆ.3 ರಂದು ನಡೆಯಲಿದೆ.
ಮಾಜಿ ಮೇಯರ್ ರುಕ್ಮಿಣಿ ಮಾದೇಗೌಡ ಅವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ.
ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಪ್ರಚಾರ ಪತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡ ಪುತ್ರ ಜಿ.ಡಿ.ಹರೀಶ್ ಗೌಡ ಭಾವಚಿತ್ರವಿದೆ. ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪ್ರಚಾರ ಪತ್ರದ ಒಂದು ಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆಶಿವಕುಮಾರ್, ಸಿದ್ದರಾಮಯ್ಯ, ಯತೀಂದ್ರ ಇದ್ದರೇ ಇನ್ನೊಂದು ಕಡೆ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್ ಗೌಡ ಭಾವಚಿತ್ರವಿದೆ.
ಇದು ಮೈಸೂರು ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಜೆ ಡಿ ದೇವೇಗೌಡ ಪಕ್ಷ ಬದಲಾಯಿಸೋದು ಪಕ್ಕಾ ಎಂದು ಹೇಳಲಾಗುತ್ತಿದೆ.









