ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸಾವು belagavi saaksha tv
ಬೆಳಗಾವಿ : ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋಕಾಕ್ ತಾಲೂಕಿನ ಸಂಗನಕೇರಿ ಬಳಿ ನಡೆದಿದೆ.
ಮೃತರನ್ನು ಗೋಪಾಲ ಮುತ್ನಾಳ(36), ರಾಮಣ್ಣ ಮಗ್ಗೆಪ್ಪಗೋಳ(40), ನೀಲವ್ವ ತಳವಾರ(44) ಎಂದು ಗುರುತಿಸಲಾಗಿದೆ.
ಇವರು ಮೊಹರಂ ಆಚರಣೆಗೆಂದು ಗೋಕಾಕ್ ತಾಲೂಕಿನ ಮಕ್ಕಳಗೇರಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.









