ಕೊರೊನಾ ಆತಂಕದ ಮಧ್ಯೆ ಶಾಲೆಗಳು ಓಪನ್..! Corona saaksha tv
ಬೆಂಗಳೂರು : ಕೊರೊನಾ ಮೂರನೇ ಅಲೆಯ ಆತಂಕದ ಮಧ್ಯೆ ಇಂದಿನಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳು ಓಪನ್ ಆಗಿವೆ. ಮೊದಲ ಹಂತವಾಗಿ ಇಂದಿನಿಂದ ರಾಜ್ಯದಲ್ಲಿ 9, 10 ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲಾಗಿದೆ.
ಇತ್ತ ಶಾಲಾ- ಕಾಲೇಜುಗಳಲ್ಲಿ ಭೌತಿಕ ತರಗತಿ ಆರಂಭದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಪರಿಶೀಲನೆ ನಡೆಸಿದರು.
ಕೋವಿಡ್ 19 ನಿಯಂತ್ರಣ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು.
ಅಲ್ಲದೆ ಯಾವುದೇ ಆತಂಕವಿಲ್ಲದೆ ಕಾಲೇಜಿಗೆ ಬನ್ನಿ ಎಂದು ಸಿಎಂ ವಿದ್ಯಾರ್ಥಿಗಳಿಗೆ ಮನವಿ ಮಾಡಿಕೊಂಡರು.
ಜೊತೆಗೆ ಮಲ್ಲೇಶ್ವರಂ ನ ನಿರ್ಮಲಾರಾಣಿ ಪ್ರೌಢ ಶಾಲೆ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿಗಳು ಸಂವಾದ ನಡೆಸಿದರು.
ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್, ಉನ್ನತಶಿಕ್ಷಣ ಸಚಿವರಾದ ಡಾ. ಅಶ್ವಥನಾರಾಯಣ ಉಪಸ್ಥಿತರಿದ್ದರು.








