ಬೆಂಗಳೂರು: 10 ವರ್ಷದ ಬಾಲಕಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಸಿಲಿಕಾನ್ ಸಿಟಿಯ ವರ್ತೂರಿನ ಅಪಾರ್ಟ್ಮೆಂಟ್‌ವೊಂದರಲ್ಲಿ (Apartment) ನಡೆದಿದೆ. ವಿದ್ಯುತ್ ತಂತಿ ತಗಲುತ್ತಿದ್ದಂತೆ ಕೂಡಲೇ ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಕುರಿತು ಪೋಷಕರು ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಲ್ಲದೇ, ಅಪಾರ್ಟ್‌ಮೆಂಟ್ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಅಪಾರ್ಟ್ಮೆಂಟ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿ 100ಕ್ಕೂ ಹೆಚ್ಚು ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಆದರೂ, ಅವರು ನಿರ್ಲಕ್ಷ್ಯ ವಹಿಸಿದ್ದಕ್ಕೆ ಮಗು ಸಾವನ್ನಪ್ಪುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.