ಕಲಬುರಗಿ: ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ (Pregnant Girl) ಸಾವನ್ನಪ್ಪಿರುವ ಘಟನೆಯೊಂದು ವರದಿಯಾಗಿದೆ.
ಅಪ್ರಾಪ್ತ ಬಾಲಕಿಯು ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ನಗರದಲ್ಲಿ ನಡೆದಿದೆ. ಸರ್ಫರಾಜ್ ಎಂಬ ಪಾಪಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ಜೀವ ಬೆದರಿಕೆ ಹಾಕಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದಾನೆ. ಹೀಗಾಗಿ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.
ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಆದರೆ, ಬಾಲಕಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾಳೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.