ಕೊಪ್ಪಳ: 14 ತಿಂಗಳ ಮಗುವೊಂದು ಮನೆಯ ಮುಂದಿನ ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಈ ಜಿಲ್ಲೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್ ನಲ್ಲಿ ನಡೆದಿದೆ. 14 ತಿಂಗಳ ಗಂಡು ಮಗು ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ಸಾವನ್ನಪ್ಪಿದೆ. ವಿಜಯೇಂದ್ರ ಸಾವನ್ನಪ್ಪಿದ ಪುಟ್ಟ ಮಗು ಎನ್ನಲಾಗಿದೆ. ಶಿವಾನಂದ ಹಾಗೂ ಶಿಲ್ಪಾ ಎಂಬುವವರು ಮಗು ಇದಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.