ಲಕ್ನೋ: ಅಪ್ರಾಪ್ತ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಉತ್ತರ ಪ್ರದೇಶದ (Uttar Pradesh) ಅಲಿಗಢ (Aligarh) ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿರುವ ಬಾಲಕನನ್ನು 14 ವರ್ಷದ ಮೋಹಿತ್ ಚೌಧರಿ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ನಡೆಯುತ್ತಿದ್ದ ಕ್ರೀಡಾ ಸ್ಪರ್ಧೆಗಾಗಿ ಓಟದ ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ ಎನ್ನಲಾಗಿದೆ.
ಬಾಲಕ ಶಾಲಾ ಮೈದಾನದಲ್ಲಿ ಓಟದ ಅಭ್ಯಾಸ ಮಾಡುತ್ತಿದ್ದ. ಮೊದಲಿಗೆ ತನ್ನ ಸ್ನೇಹಿತರೊಂದಿಗೆ ಎರಡು ಸುತ್ತು ಓಡಿದ್ದಾನೆ. ಮೂರನೇ ಸುತ್ತನ್ನು ಓಡುವಾಗ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಆತನ ಪೋಷಕರಿಗೆ ಕರೆ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಇತ್ತೀಚೆಗೆ ವಿದ್ಯಾರ್ಥಿಗಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕದ ಸಂಗತಿಯಾಗಿದೆ.