ಹೈದರಾಬಾದ್ : ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ವೇಳೆ ಸುಮಾರು 200 ವರ್ಷ ಹಳೆಯ ಶಿವ ದೇವಾಲಯ ಪತ್ತೆಯಾಗಿದೆ.
ಪೆನ್ನಾ ನದಿ ಪಾತ್ರದಲ್ಲಿ ಮರಳು ಗಾಣಿಗಾರಿಕೆ ವೇಳೆ ಶಿವ ದೇವಾಲಯ ಪತ್ತೆಯಾಗಿದ್ದು, ಜನರು ಅಚ್ಚರಿಗೊಳಗಾಗಿದ್ದಾರೆ. ಸದ್ಯ ಪತ್ತೆಯಾಗಿರುವ ದೇಗುಲ ಸುಮಾರು 200 ವರ್ಷ ಹಳೆಯದ್ದು ಎಂದು ಸ್ಥಳೀಯರು ಹೇಳುತ್ತಿದ್ದಾರೆ. 
ಸದ್ಯ ದೇಗುಲದ ಗೋಪುರ ಕಾಣಿಸಿಕೊಂಡಿದ್ದು, ಕಲ್ಲುಗಳಿಂದ ಮಾಡಲ್ಪಟ್ಟಿದೆ. ಗೋಪುರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಮರಳಿನಲ್ಲಿ ಹುದುಗಿರುವ ದೇವಾಲಯ ತೆಗೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ.








