
ಬೀದರ್ : ಕ್ವಾರೆಂಟೈನ್ ಮಾಡುವ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಬೀದರ್ ಜಿಲ್ಲೆಯ ಔರಾದ ತಾಲ್ಲೂಕಿನ ವನಮಾರಪಳ್ಳಿ ಎಂಬ ಗ್ರಾಮದಲ್ಲಿ ಕ್ವಾರೆಂಟೈನ್ ನಲ್ಲಿ ಇದ್ದ ಕೊರೊನಾ ಸೋಂಕು ಶಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಹೊರ ರಾಜ್ಯಗಳಿಂದ ಬಂದವರನ್ನು ಕ್ವಾರೆಂಟೈನ್ ಮಾಡಲಾಗುತ್ತಿದೆ. ಅದರ ಪ್ರಕಾರ ಬೀದರ್ ಜಿಲ್ಲೆಯ ಔರಾದ ತಾಲ್ಲೂಕಿನ ವನಮಾರಪಳ್ಳಿ ಯಲ್ಲಿ ಮುಂಬೈನಿಂದ 6 ದಿನಗಳ ಹಿಂದೆ ಬಂದಿದ್ದ 24 ವರ್ಷದ ಸಚಿನ್ ಎಂಬ ಯುವಕನನ್ನು ಕ್ವಾರೆಂಟೈನ್ ಮಾಡಲಾಗಿತ್ತು. ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರೆಂಟೈನ್ ನಲ್ಲಿ ಇದ್ದ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕೃತ್ಯಕ್ಕೆ ಸಂಬಂಧಿಸಿ ಔರಾದ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








