3 ವರ್ಷದ ಬಾಲಕನೋರ್ವ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.
ಈ ಘಟನೆ ಬಿಹಾರದ ನಳಂದದ ಕುಲ್ ಗ್ರಾಮದಲ್ಲಿ ನಡೆದಿದೆ. ಬಾಲಕನು 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದಾನೆ ಎನ್ನಲಾಗಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಶಿವಂ ಎಂಬ ಬಾಲಕನನ್ನು ರಕ್ಷಿಸಲು ಎನ್ಡಿಆರ್ಎಫ್ ಮತ್ತು ಇತರ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಯುತ್ತಿದೆ. ಶಿವಮ್ಮನ ತಾಯಿ ತಾನು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರಭದಲ್ಲಿ ಆಟವಾಡುತ್ತಿದ ಮಗು ಕಾಲು ಜಾರಿ ಬೋರ್ ವೆಲ್ ನಲ್ಲಿ ಬಿದ್ದಿದ್ದಾನೆ ಎನ್ನಲಾಗಿದ್ದು, ಸದ್ಯ ಬಾಲಕನಿಗೆ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. ಅಲ್ಲದೇ, ಜೆಸಿಬಿ ಯಂತ್ರಗಳ ಸಹಾಯದಿಂದ ಹೊರತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೋರ್ವೆಲ್ನಿಂದ ಹೊರತೆಗೆದ ಹೆಣ್ಣು ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿತ್ತು. ಇದರ ಬೆನ್ನಲ್ಲಿಯೇ ಮತ್ತೊಂದು ಇಂತಹ ಘಟನೆ ನಡೆದಿದೆ.