ಇಂಡೋನೇಷ್ಯಾ: ಮಳೆ ನೀರಿನಲ್ಲಿ ಆಟವಾಡುತ್ತ ಮೂರು ವರ್ಷದ ಮಗು ಚರಂಡಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಈ ಘಟನೆ ಇಂಡೋನೇಷ್ಯಾದ ಸುರಬಯಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದ್ದು, ಡಿ. 24ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಮಳೆಗೆ ಮೂರು ಮಕ್ಕಳು ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.
ವಿಡಿಯೋದಲ್ಲಿ ಇಬ್ಬರು ಮಕ್ಕಳು ಆಟವಾಡುವುದು ಕಂಡು ಬಂದಿದೆ. ಆನಂತರ ಚಿಕ್ಕ ಮಗು ಆಟವಾಡುತ್ತ ನೀರಿನಲ್ಲಿ ಕ ಚ್ಚಿ ಹೋಗಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನೆಟ್ಟಿಗರು ಮಗುವಿನ ಪೋಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವರು ಈ ಅಪಘಾತಕ್ಕೆ ಮಗುವಿನ ಪೋಷಕರನ್ನು ದೂಷಿಸಿದ್ದಾರೆ.
ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು
ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...








