ನವದೆಹಲಿ: 4 ವರ್ಷದ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕ್ರೌರ್ಯ ಮೆರೆದಿದ್ದಾನೆ ಎನ್ನಲಾಗಿದೆ.
ಈ ಹೀನಾಯ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. ಭೂಪೇಂದ್ರ ಸಿಂಗ್ ಎಂಬ ಆರೋಪಿ ಸಬ್ ಇನ್ಸ್ಪೆಕ್ಟರ್ 4 ವರ್ಷದ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಈ ಕುರಿತು ಮಾಹಿತಿ ನೀಡಿದ್ದು, ಆರೋಪಿ ಬಂಧಿಸಲಾಗಿದೆ ಎಂದಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅತ್ಯಾಚಾರ ನಡೆಸಿದ ಸಬ್ ಇನ್ಸ್ಪೆಕ್ಟರ್ ನನ್ನು ಪೊಲೀಸರು ವಶಕ್ಕೆ ಪಡೆಯುವುದಕ್ಕೂ ಮುನ್ನ ಜನರು ಮನಬಂದಂತೆ ಥಳಿಸಿದ್ದಾರೆ.