ಲಕ್ನೋ : 60 ಪಿಶಾಚಿ ವ್ಯಕ್ತಿತ್ವದ ಪಾಪಿಯೊಬ್ಬ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ (Rape) ನಡೆಸಿ, ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಶೇರ್ ಮೊಹಮ್ಮದ್ ಎಂಬ ಪಿಶಾಚಿ ಮನಸ್ಥಿತಿಯ ವ್ಯಕ್ತಿಯೇ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫರೀದ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಾಲಕಿ ತನ್ನ ಮನೆಯ ಹೊರಗೆ ಆಟವಾಡಲು ಹೋಗಿ, ಮರಳಿ ಬಾರದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಮೊಹಮ್ಮದ್ ಮನೆ ತಲುಪಿದಾಗ ಬಾಲಕಿಗೆ ಬಲವಂತಪಡಿಸುವುದನ್ನು ನೋಡಿದ್ದಾಗಿ ಪೋಷಕರು ತಿಳಿಸಿದ್ದಾರೆ. ಬಾಲಕಿಯ ಕುಟುಂಬಸ್ಥರನ್ನು ಆರೋಪಿ ಮೊಹಮ್ಮದ್ ನೋಡಿದ ಕೂಡಲೇ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ರಕ್ತಸಿಕ್ತ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಪೋಷಕರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಪಾಲಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು, ಶೇರ್ ಮೊಹಮ್ಮದ್ ವಿರುದ್ಧ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ನಂತರ ಆತನಿಗಾಗಿ ಹುಡುಕಾಟ ನಡೆಸಿದಾಗ ಆರೋಪಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ನಂತರ ಪೊಲೀಸರ ಕಠಿಣ ಕ್ರಮ ಅಥವಾ ಪಶ್ಚಾತ್ತಾಪದಿಂದ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.