ಚಿತ್ರದುರ್ಗ: ಬೆಳ್ಳಂಬೆಳಿಗ್ಗೆ ಮೊಳಕಾಲ್ಮೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ ಕೆರೆ ಗಾಮದಲ್ಲಿ ನಡೆದಿದೆ.

ಅಪಘಾತದ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ಅಪ್ಪಚ್ಚಿಯಾಗಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಭೀರವಾಗಿದೆ. ಗಾಯಾಳುಗಳನ್ನು ಚಳ್ಳಕೆರೆ ಹಾಗೂ ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರನ್ನು ದೇವದುರ್ಗ ತಾಲೂಕಿನ ಹುಣಸೂರು ಗ್ರಾಮದ ತಿಮ್ಮಣ್ಣ(40), ಪತ್ನಿ ರತ್ನಮ್ಮ(36), ಸೋಮನಮರಡಿ ಗ್ರಾಮದ ದುರುಗಪ್ಪ(16), ಗಜಲಿ ಗ್ರಾಮದ ಮಹೇಶ್(19) ಹಾಗೂ 55 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಮೃತರು ಕ್ರೂಸರ್ ವಾಹನದಲ್ಲಿ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಹೊರಟಿದ್ದರು.
ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಕಗಳೂರು ಕಡೆಗೆ ಕ್ರೂಸರ್ ಹೊರಟಿತ್ತು. ಬೆಂಗಳೂರಿನಿಂದ ಲಿಂಗಸುಗೂರಿನತ್ತ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಾಧಿಕಾ, ಮೊಳಕಾಲ್ಮೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








