ನಟಿ ಶಿಲ್ಪಾ ಶೆಟ್ಟಿ ಫಿಟ್ನೆಸ್ ಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಹೀಗಾಗಿಯೇ ಅವರು ಪ್ರತಿ ದಿನವೂ ಯೋಗ ಮಾಡುತ್ತಾರೆ.
ಶಿಲ್ಪಾ ಶೆಟ್ಟಿ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಭರ್ಜರಿ ಕಮೆಂಟ್ ಮಾಡುತ್ತಿದ್ದಾರೆ. ಎಲ್ಲರೂ ಸದ್ಯ ಶಿಲ್ಪಾ ಶೆಟ್ಟಿ ಸೌಂದರ್ಯದ ಕುರಿತು ಮಾತನಾಡುತ್ತಿದ್ದಾರೆ. ಶಿಲ್ಪಾ ಶೆಟ್ಟಿ ಅವರ ಅಂದಕ್ಕೆ ಅನೇಕರು ಮರುಳಾಗಿದ್ದಾರೆ. ಅವರು ಇಷ್ಟೊಂದು ಫಿಟ್ ಆಗಿರೋಕೆ ಹೇಗೆ ಸಾಧ್ಯ ಎಂದು ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಈ ಫೋಟೋಗೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.
ಶಿಲ್ಪಾ ಶೆಟ್ಟಿ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಕಿರುತೆರೆ ರಿಯಾಲಿಟಿ ಶೋಗಳಲ್ಲೂ ತೊಡಗಿಕೊಂಡಿದ್ದಾರೆ. ಶಿಲ್ಪಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 3 ಕೋಟಿ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ.
ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಕ್ಕಿ ಬಿದ್ದರು. ಆಗಿನಿಂದ ಶಿಲ್ಪಾ ಶೆಟ್ಟಿ ಅಭಿಮಾನಿಗಳಿಂದ ದೂರವೇ ಇದ್ದರು. ಈಗ ಮತ್ತೆ ಅಭಿಮಾನಿಗಳ ಕಣ್ಣಿಗೆ ಕಾಣುತ್ತಿದ್ದಾರೆ.