ರಾಮನಗರ : ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಬರೋಬ್ಬರಿ 800 ಮಂದಿನ ಕ್ವಾರಂಟೈನ್ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಸೋಮುವಾರ 85 ವರ್ಷದ ವೃದ್ದರೊಬ್ಬರು ಸೋಂಕು ತಗುಲಿ ಮೃತಪಟ್ಟಿದ್ದರು. ಮೃತಪಟ್ಟ ವೃದ್ದರು ಕನಕಪುರದ ಎಂ.ಜಿ. ರಸ್ತೆಯಲ್ಲಿರುವ ಡಾ.ಟೇಕಂರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರನ್ನು ಕ್ವಾರಂಟೈನ್ ಮಾಡಲಾಗಿತ್ತು. ಈ ಸಮಯದಲ್ಲಿ ವೈದ್ಯರ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಇದೀಗ ವೈದ್ಯರಿಗೆ ಕೊರೊನಾ ಸೋಂಕು ಪಾಸಿಟಿವ್ ಕಾಣಿಸಿಕೊಂಡಿದೆ.
ಪತಿ-ಪತ್ನಿ ಇಬ್ಬರೂ ಸಹ ವೈದ್ಯರಾಗಿದ್ದಾರೆ. ಅಲ್ಲದೆ ಪತ್ನಿ ಸ್ತ್ರೀರೋಗ ತಜ್ಞರಾಗಿದ್ದಾರೆ. ಹಾಗಾಗಿ ಇವರ ಬಳಿ ಹೆಚ್ಚು ಗರ್ಭಿಣಿಯರೇ ಬರುತ್ತಿದ್ದಾರೆ. ಇದರಿಂದಾಗಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ೀ ವೈದ್ಯರ ಬಳಿ ಸರಿ ಸುಮಾರ 800 ಜನ ಚಿಕಿತ್ಸೆ ಪಡೆದಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ. ಇಂತಹ ಗಂಭೀರ ಪರಿಸ್ಥಿತಿ ನಿಭಾಯಿಸಲು ಆಡಳಿತ ಹರಸಾಹಸ ಪಡುತ್ತಿದೆ. ಆದ್ದರಿಂದ ಜೂನ್ 6 ರಿಂದ ಈವರೆಗೂ ಯಾರ್ಯಾರು ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾರೆ. ಅವರೆಲ್ಲರೂ ಹೋಮ್ ಕ್ವಾರಂಟೈನ್ ಗೆ ಒಳಗಾಗಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.








