ಹಾಸನ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್ ವೊಂದು ವೃದ್ಧೆಗೆ ಡಿಕ್ಕಿ ಹೊಡೆದ ಪರಿಣಾಮ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಅಜ್ಜಿ ಹೋರಾಡುತ್ತಿದ್ದಾರೆ.
ಈ ಘಟನೆ ನಗರದ ಹೊಸಲೈನ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ (Accident) ತೀವ್ರವಾಗಿ ಗಾಯಗೊಂಡಿರುವ ವೃದ್ಧೆ ನಿಂಗಜಮ್ಮ (82) ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ವೃದ್ಧೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರ ಅಜಾಗರೂಕತೆಯಿಂದಾಗಿ ಡಿಕ್ಕಿ ಹೊಡೆದಿದ್ದಾನೆ. ಆಗ ಬೈಕ್ ನಿಲ್ಲಿಸದೆ ಆತ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರರು ವೃದ್ಧೆಯನ್ನು ಉಪಚರಿಸಿದ್ದಾರೆ. ನಂತರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಪೆನ್ಷನ್ಮೊಹಲ್ಲಾ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ