ಕೇರಳದಲ್ಲಿ ಹಕ್ಕಿಜ್ವರ – ಕೋಳಿ, ಮೊಟ್ಟೆ ನಾಶಕ್ಕೆ ಸರ್ಕಾರದ ಆದೇಶ
ಕೇರಳದ ಆಲಪ್ಪುಳದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರ ಪ್ರಕರಣ ದೃಢಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಕರಣ ಪೀಡಿತ ಪ್ರದೇಶಗಳಲ್ಲಿ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು ಮತ್ತು ಇತರ ಪಕ್ಷಿಗಳನ್ನು ನಾಶಗೊಳಿಸಲು ಕೇರಳ ಸರ್ಕಾರ ಆದೇಶಿಸಿದೆ.
ಆಲಪ್ಪುಳ ಜಿಲ್ಲೆಯ ಥಕಳಿ ಪಂಚಾಯತ್ ಕೋಟ್ಟನಾಡ್ನಲ್ಲಿ ರೈತರೊಬ್ಬರು ಸಾಕಿದ್ದ ಸಾವಿರಾರು ಬಾತುಕೋಳಿಗಳು ಸತ್ತ ಹೋಗಿದ್ದವು. ಅಧಿಕಾರಿಗಳು ಸತ್ತಿರುವ ಬಾತುಕೋಳಿಗಳ ಮಾದರಿಗಳನ್ನ ಭೋಪಾಲ್ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ಗೆ ಮಾದರಿಗಳನ್ನು ಕಳುಹಿಸಿದ್ದರು. ಇದೀಗ ವರದಿಯಲ್ಲಿ ಹಕ್ಕಿ ಜ್ವರ ಪ್ರಕರಣಗಳು ದೃಢಪಟ್ಟಿದೆ.
ಹೀಗಾಗಿ ಹಕ್ಕಿ ಜ್ವರ ಹರಡದಂತೆ ರೋಗ ಪೀಡಿತ ಪ್ರದೇಶದಲ್ಲಿರುವ ಬಾತುಕೋಳಿಗಳನ್ನು ಕೊಲ್ಲಲು ಪಶುವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ. ಈ ವರ್ಷ ಕೇರಳದಲ್ಲಿ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ.