ಯಾದಗಿರಿ: ಶಹಾಪುರದಲ್ಲಿ ಪಡಿತರ ಅಕ್ಕಿ ಕಳ್ಳತನ (Ration Theft) ಮಾಡಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod) ಸಹೋದರನ ರೈಸ್ ಮಿಲ್ ನಲ್ಲಿ ಬರೋಬ್ಬರಿ 700 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದೆ.
ಗುರುಮಠಕಲ್ ನಲ್ಲಿನ ಲಕ್ಷ್ಮೀವೆಂಕಟೇಶ್ವರ ರೈಸ್ ಮಿಲ್ ನಿಂದ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಸುರಪುರ ಡಿವೈಎಸ್‌ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆ ಪಾಲಿಶ್ ಮಾಡಿದ್ದ 630 ಕ್ವಿಂಟಾಲ್ ಪಡಿತರ ಅಕ್ಕಿ ಸೇರಿದಂತೆ ಒಟ್ಟು 700 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಪಡಿತರ ಅಕ್ಕಿಯನ್ನು ರಾಜು ರಾಠೋಡ್ ಗೆ ಮಾರಟ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ರಾಜು ರಾಠೋಡ್ ತಲೆ ಮರಿಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.