ಚಿಕ್ಕಬಳ್ಳಾಪುರ: ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದರೂ ಹಲವಾರು ಯುವಕರಿಗೆ ಮಾತ್ರ ಇನ್ನೂ ಬುದ್ಧಿ ಬರುತ್ತಿಲ್ಲ. ಇಲ್ಲೊಬ್ಬ ಬಾಲಕ ವ್ಹೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಅಪ್ರೋಜ್ ಪಾಷಾ(16) ಸಾವನ್ನಪ್ಪಿದ ಬಾಲಕ. ಈತ ವ್ಹೀಲಿಂಗ್ ಮಾಡಲು ಹೋಗಿ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮೈಲಾಂಡಹಳ್ಳಿ ಗ್ರಾಮದ 18 ವರ್ಷದ ತಾಜ್ ಉಲ್ಲಾ ಷರೀಪ್ ಹಾಗೂ ಅಪ್ರೋಜ್ ಪಾಷಾ ಕುರುಟಹಳ್ಳಿ ಗ್ರಾಮದ ರಸ್ತೆಯಲ್ಲಿ ಬೈಕ್ ವೀಲ್ಹಿಂಗ್ ಮಾಡಿದ್ದರು. ಬೈಕ್ ಚಾಲನೆ ಮಾಡುತ್ತಿದ್ದ ತಾಜ್ ಉಲ್ಲಾ ಷರೀಪ್ ಬೈಕ್ ವೀಲ್ಹಿಂಗ್ ಮಾಡುತ್ತಿದ್ದರೆ, ಹಿಂಬದಿ ಸವಾರನಾಗಿದ್ದ ಅಪ್ರೋಜ್ ಪಾಷಾ ಕೈಯಲ್ಲಿ ಮಾರುದ್ದ ಲಾಂಗ್ ಹಿಡಿದು ರಸ್ತೆಗೆ ಸವರುತ್ತ ಸಂಚರಿಸುತ್ತಿದ್ದ.
ಈ ವೇಳೆ ಬೈಕ್ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ತಾಜ್ ಉಲ್ಲಾ ಷರೀಪ್ ಪ್ರಾಣಾಪಾಯದಿಂದ ಪಾರಾಗಿದ್ದ. ಆದರೆ, ಅಪ್ರೋಜ್ ಪಾಷಾನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.








