ಬೆಂಗಳೂರು: ಮದುವೆಗೆ ಒಪ್ಪದ ಯುವತಿಗೆ ಪ್ರಿಯತಮ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಆದರೆ, ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಅಜಯ್(29) ಚಾಕು ಇರಿದ ಯುವಕ ಎನ್ನಲಾಗಿದೆ.
ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಕೆಲವು ದಿನಗಳಿಂದಲೂ ಯುವಕ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೂ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ, ಕೊನೆಯ ಸಮಯದಲ್ಲಿ ಯುವತಿ ಮದುವೆಗೆ ನಿರಾಕರಿಸಿದ್ದು, ಕೋಪಗೊಂಡ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೆಜೆ ನಗರ ಪೊಲೀಸರು ಆರೋಪಿ ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.








