ಗದಗ: ಗೂಳಿಯೊಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ದಾಳಿ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಗದಗದ ಬೆಟಗೇರಿಯಲ್ಲಿ ಈ ಘಟನೆ ನಡೆದಿದ್ದು, ಗೂಳಿ ಏಕಾಏಕಿ ಜನರ ಮೇಲೆ ದಾಳಿ ನಡೆಸಿ, ಸಿಕ್ಕ ಸಿಕ್ಕವರನ್ನು ಗಾಯಗೊಳಿಸಿದೆ. ಹೀಗಾಗಿ ಸಾರ್ವಜನಿಕರು ಆತಂಕದಲ್ಲಿಯೇ ಓಡಾಡುವಂತಾಗಿದೆ.
ಸದ್ಯ ಗೂಳಿಯ ಅಟ್ಯಾಕ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಸುಮಾರು 8 ಜನರ ಮೇಲೆ ಗೂಳಿ ದಾಳಿ ನಡೆಸಿದೆ. ಹೀಗಾಗಿ ಸಾರ್ವಜನಿಕರು ನಗರಸಭೆ ವಿರುಧ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.