ಪುರಿ: ಸೇತುವೆ ಮೇಲಿಂದ ಬಸ್ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಒಡಿಶಾದ ಜಾಜ್ ಪುರ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ 16ರ ಬಾರಾಬತಿ ಸೇತುವೆಯಲ್ಲಿ ಈ ಘಟನೆ ನಡೆದಿದೆ. ಬಸ್ ಪುರಿಯಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸೇತುವೆ ಮೇಲಿಂದ ಉರುಳಿದ ಪರಿಣಾಮ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಅಲ್ಲದೇ, ಬಸ್ ನಲ್ಲಿದ್ದ ಬಹುತೇಕರು ಗಾಯಗೊಂಡಿದ್ದಾರೆ. ಈ ಬಸ್ ನಲ್ಲಿ ಸುಮಾರು 40 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಸಿಎಂ ನವೀನ್ ಪಟ್ನಾಯಕ್ ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.