ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬಾಗೇಪಲ್ಲಿಯ ಪಾತಪಾಳ್ಯ ಹತ್ತಿರದ ನಗರ್ಲು ಕ್ರಾಸ್ ಹತ್ತಿರ ನಡೆದಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಲವಾರು ಜನರು ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಚಿಂತಾಮಣಿ ಹಾಗೂ ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಬಸ್‍ನ್ನು ಜೆಸಿಬಿ ಮೂಲಕ ತೆರವು ಮಾಡಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಕುರಿತು ಪಾತುಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.