ರಾಜಸ್ಥಾನ: ರಾಜ್ಯದ 11 ರಾಜ್ಯಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಇಂದು ರಾಜಸ್ಥಾನ್ ದಲ್ಲಿ ಅವಘಡವೊಂದು ನಡೆದಿದೆ.
ಮತಗಟ್ಟೆಯೊಂದರಲ್ಲಿ ಚುನಾವಣಾ ಸಿಬ್ಬಂದಿ ಮೇಲೆ ಅಭ್ಯರ್ಥಿ ಕಪಾಳ ಮೋಕ್ಷ ಮಾಡಿರುವ ಘಟನೆ ನಡೆದಿದೆ. ಅಲ್ಲಿನ ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ. ಡಿಯೋಲಿ-ಉನಿಯಾರಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ನರೇಶ್ ಮೀನಾ ಅವರು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಗೆ ಕಪಾಳಮೋಕ್ಷ ಮಾಡಿದ್ದು, ವಿಡಿಯೋದಲ್ಲಿ ಅದು ಸೆರೆಯಾಗಿದೆ.
ಸಂರವತ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆಗೆ ತೆರಳಿದ್ದ ಮೀನಾ, ಚುನಾವಣಾ ಪ್ರೋಟೋಕಾಲ್ ನ್ನು ಮೇಲ್ವಿಚಾರಣೆ ಮಾಡಲು ಕರ್ತವ್ಯದಲ್ಲಿದ್ದ ಎಸ್‌ಡಿಎಂ ಅಮಿತ್ ಚೌಧರಿ ಗೆ ಹೇಳಿ ಕಪಾಳಮೋಕ್ಷ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ.
ಕಾಂಗ್ರೆಸ್ ನಾಯಕ ಹರೀಶ್ ಚಂದ್ರ ಮೀನಾ ಅವರು ಸಾರ್ವತ್ರಿಕ ಚುನಾವಣೆಯ ನಂತರ ಲೋಕಸಭೆಗೆ ಪ್ರವೇಶಿಸಿದ್ದಾರೆ. ತೆರವಾಗಿದ್ದ ಅವರ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲೇ ಗಲಾಟೆ ನಡೆದಿದೆ.








