ಮಂಗಳೂರು: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ, ಚಾಲಕನು ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಈ ಘಟನೆ ಬಂಟ್ವಾಳದಲ್ಲಿ (Bantwal) ನಡೆದಿದೆ. ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದ ಇನ್ನುಳಿದ ಸುಮಾರು ಎಂಟು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶಾಲಾ ಮಕ್ಕಳ ವಾಹನ ಅಪಘಾತದ ಭೀಕರ ಸಿಸಿಟಿವಿಯಲ್ಲಿ ಸೆರೆಯಾಗಿದೆ.








