ಆನೇಕಲ್: ಕಾರಿನ ಎಂಜಿನ್‌ನಲ್ಲಿ (Car Engine) ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲೂಕಿನ ಗೋಪಸಂದ್ರ (Gopasandra) ಗೇಟ್ ಹತ್ತಿರ ನಡೆದಿದೆ.
ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾರಿನ ಕೆಲವು ಭಾಗಗಳನ್ನು ಆವರಿಸಿದ್ದು, ಕಾರಿನಲ್ಲಿದ್ದ ಚಾಲಕ ಕೂಡಲೇ ಕೆಳಗೆ ಇಳಿದಿದ್ದಾನೆ. ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.
ದೊಮ್ಮಸಂದ್ರ ರಸ್ತೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.







