ಬೆಂಗಳೂರು : ರಸ್ತೆ ದಾಟುವ ಸಂದರ್ಭದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರು ಹತ್ತಿರ ನಡೆದಿದೆ. ಈ ಅವಘಡದಲ್ಲಿ ರಘು(28) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಚಾರಕ, ಅಪಘಾತದ ನಂತರ ಕಾರು ನಿಲ್ಲಿಸಿ ಪರಾರಿಯಾಗಿದ್ದಾನೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.