ಬೆಂಗಳೂರು: ಬಿಎಂಟಿಸಿ ಬಸ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಹೊತ್ತಿ ಉರಿದ ಘಟನೆ ನಡೆದಿದೆ.
ನಾಯಂಡಹಳ್ಳಿ ಹತ್ತಿರದ ರಿಂಗ್ ರಸ್ತೆಯಲ್ಲಿ ನಡೆದಿದೆ. ನಿಂತಿದ್ದ ಬಿಎಂಟಿಸಿ ಬಸ್ ಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ನಡುರಸ್ತೆಯಲ್ಲಿಯೇ ಬೆಂಕಿ ಹಚ್ಚಿಕೊಂಡಿದ್ದು (Fire Accident) ಕಾರು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಕಾರು ಘಟನೆಯಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬಸ್ ನ ಹಿಂದಿನ ಭಾಗ ಸ್ವಲ್ಪ ಬೆಂಕಿಗಾಹುತಿಯಾಗಿದೆ. ವೇಗವಾಗಿ ಕಾರ್ ಬಂದು ಡಿಕ್ಕಿ ಹೊಡೆದ ಹಿನ್ನೆಲೆ ಕಾರು ಚಾಲಕನಿಗೆ ಮೂಗಿನ ಬಳಿ ಗಾಯಗಳಾಗಿವೆ. ಬಸ್ ನಲ್ಲಿದ್ದ ಪ್ರಯಾಣಿಕರು ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಂದ್ರಲೇಔಟ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಲು ನಿಲ್ಲಿಸಿದ್ದ ವೇಳೆ ಕಾರು ವೇಗವಾಗಿ ಬಂದು ಬಸ್ಗೆ ಗುದ್ದಿದೆ.