ಬೆಂಗಳೂರು: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಹತ್ತಿರ ಈ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ (Lorry) ಹಿಂಬದಿಯಿಂದ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ವ್ಯಕ್ತಿ. ಸಾವನ್ನಪ್ಪಿದ ವ್ಯಕ್ತಿ, ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.