ಹಾಸನ: ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಆಲೂರಿನ ಕೂಡಿಗೆಯಲ್ಲಿ ನಡೆದಿದೆ. ಪ್ರದೀಪ್ (30), ಗುರು (25) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಕೂಡ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೋಟೆಲ್ ನ ಪೂಜೆಗೆಂದು ಹೊರಟಿದ್ದ ಸಂದರ್ಭದಲ್ಲಿ ಕೂಡಿಗೆ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಪಂಕ್ಚರ್ ಆಗಿ ರಸ್ತೆ ಮಧ್ಯೆ ನಿಂತಿದ್ದ ಟಿಂಬರ್ ತುಂಬಿದ್ದ ಲಾರಿ ಮಂಜು ಆವರಿಸಿದ್ದ ಕಾರಣ ಕಾರಿನ ಚಾಲಕನಿಗೆ ತಿಳಿದಿಲ್ಲ. ಹೀಗಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ರಭಸಕ್ಕೆ ಕಾರು ರಸ್ತೆಯಲ್ಲಿ ಉರುಳಿ ಬಿದ್ದಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.