ಅಹಮದಾಬಾದ್: ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 10 ಜನ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಗುಜರಾತ್ ನ ಅಹಮದಾಬಾದ್ ಹತ್ತಿರ ನಡೆದಿದೆ. ಅಹಮದಾಬಾದ್-ವಡೋದರ ಎಕ್ಸ್ ಪ್ರೆಸ್ ವೇನಲ್ಲಿ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಹೊರ ತೆಗೆದಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದವರ ವಿವರ ಪಡೆಯಲಾಗುತ್ತಿದೆ. ಇದಕ್ಕಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಮರಣೋತ್ತರ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.