ಬಾಗಲಕೋಟೆ: ಟ್ರ್ಯಾಕ್ಟರ್ ಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ನಡೆದಿದ್ದು, ಕಾರಿನಲ್ಲಿ ನಾಲ್ವರು ಸ್ತಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಮಹಿಳೆ ಕೂಡ ಸಾವನ್ನಪ್ಪಿದ್ದಾರೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಗ್ರಾಮದ ನಾಲ್ವರು ಕಾರಿನಲ್ಲಿ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾರು ಚಾಲಕ ಮಲ್ಲು ಪೂಜಾರಿ ಎನ್ನಲಾಗಿದ್ದು, ಅತಿಯಾದ ವೇಗವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳಗ್ಗೆ ಬೀಳಗಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.