ಚಿತ್ರದುರ್ಗ: ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಈ ಘಟನೆ ಜಿಲ್ಲೆಯ ಚಳ್ಳಕೆರೆ (Challakere) ತಾಲೂಕಿನ ಸಾಣಿಕೆರೆ ಹತ್ತಿರ ನಡೆದಿದೆ. ಲಿಂಗಪ್ಪ (26), ಸಿಂಧುಶ್ರೀ (2), ಹಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಸಾವನ್ನಪ್ಪಿದವರು ರಾಯಚೂರು (Raichur) ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದ ಕೂಲಿ ಕಾರ್ಮಿಕರಾಗಿದ್ದು, ಕೆಲಸದ ನಿಮಿತ್ತ ಬೆಂಗಳೂರಿಗೆ (Bengaluru) ಪ್ರಯಾಣ ಬೆಳೆಸಿದ್ದರು.
ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನು ಯಲ್ಲಮ್ಮ (30), ಮಲ್ಲಮ್ಮ (20) ಹಾಗೂ ನಾಗಪ್ಪ (35) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.