ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಆಘಾತಕಾರಿ ಮಹಾರಾಷ್ಟ್ರದ ಗೊಂಡಿಯಾದ ಅಮ್ಗಾಂವ್ ಮತ್ತು ಸಲೇಕಾ ಬಳಿ ನಡೆದಿದೆ.
ಸಲ್ಲೇಖನ ವ್ರತದಿಂದ ದೇಹ ತ್ಯಜಿಸಿದ ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಮಹಾರಾಜರ ಅಂತಿಮ ದರ್ಶನಕ್ಕೆ 6 ಜನರು ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕಾರು ಕಾಲುವೆಗೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರೆ, ಇತರರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ.
ಆಚಾರ್ಯ ವಿದ್ಯಾಸಾಗರ ಮಹಾರಾಜ್ ಸಲ್ಲೇಖನ ವ್ರತ ಘೋಷಿಸಿ ದೇಹ ತ್ಯಾಗ ಮಾಡಿದ್ದಾರೆ. ಛತ್ತೀಸ್ಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಅವರು ಸಾವನ್ನಪ್ಪಿದ್ದರು. ಕಳೆದ ಮೂರು ದಿನಗಳಿಂದ ಅವರು ಆಹಾರ ಮತ್ತು ನೀರನ್ನು ಸಂಪೂರ್ಣವಾಗಿ ತ್ಯಜಿಸಿದ್ದರು.
ಆಚಾರ್ಯಶ್ರೀಗಳು ಕೊನೆಯ ಉಸಿರಿನವರೆಗೂ ಜಾಗೃತ ಸ್ಥಿತಿಯಲ್ಲಿದ್ದು ಮಂತ್ರಗಳನ್ನು ಪಠಿಸುತ್ತಲೇ ಇಹಲೋಕ ತ್ಯಜಿಸಿದ್ದರು.