ಮುಂಬಯಿ : ಕಾರೊಂದು ಸೇತುವೆ ಮೇಲಿಂದ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಘಟನೆಯಲ್ಲಿ ಮೂವರು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧರ್ಮಾನಂದ ಗಾಯಕ್ವಾಡ್ (41) ಮತ್ತು ಸಂಬಂಧಿಕರಾದ ಮಂಗೇಶ್ ಜಾಧವ್ (46) ಮತ್ತು ನಿತೀನ್ ಜಾಧವ್ (48) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಗಾಯಕ್ವಾಡ್ ಅವರು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಳೆ ಗುಂಪು) ಕಾರ್ಯಕರ್ತರಾಗಿದ್ದರು ಎನ್ನಲಾಗಿದೆ.
ಕಾರು ಕಿನವಲಿ ಬಳಿಯ ಸೇತುವೆಯ ಮೇಲೆ ಮುಂಬೈ-ಪನ್ವೇಲ್ ರಸ್ತೆಯಲ್ಲಿ ನೇರಲ್ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಯಿಂದಾಗಿ ಹುಬ್ಬಳ್ಳಿ-ದಾದರ್ ಎಕ್ಸ್ಪ್ರೆಸ್ ರೈಲನ್ನು ಕರ್ಜಾತ್-ಕಲ್ಯಾಣ ಮಾರ್ಗದ ಮೂಲಕ ತಿರುಗಿಸಲಾಗಿದೆ ಎನ್ನಲಾಗಿದೆ.