ಮಂಗಳೂರು : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ (Sullia) ತಾಲೂಕಿನ ಅಡ್ಕಾರು ಎಂಬ ಪ್ರದೇಶದಲ್ಲಿ ಸಂಭವಿಸಿದೆ. ಕಾರ್ಮಿಕರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳು ಎಂದು ತಿಳಿದು ಬಂದಿದೆ.
ಚಂದ್ರಪ್ಪ, ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಕಾರು ಮಡಿಕೇರಿಯಿಂದ ಮಂಗಳೂರು ಮಾರ್ಗವಾಗಿ ಚಲಿಸುತ್ತಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕಾರು, ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾಗಿದೆ. ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.