ನಡು ರಸ್ತೆಯಲ್ಲಿಯೇ ಕಾರೊಂದು ಹೊತ್ತಿ ಉರಿದ ಪರಿಣಾಮ 7 ಜನ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ.
ಈ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದಾಗಿ ಈ ಘಟನೆ ನಡೆದಿದೆ. ಪರಿಣಾಮ ಕಾರಿನಲ್ಲಿದ್ದ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ 7 ಜನ ಸಜೀವವಾಗಿ ದಹನವಾಗಿದ್ದಾರೆ.
ಸಾವನ್ನಪ್ಪಿದ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದವರಾಗಿದ್ದು, ರಾಜಸ್ಥಾನದ ಸಲಾಸರ್ ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಕ್ಕೆ ಹೋಗಿ ಮರಳಿ ಬರುತ್ತಿದ್ದರು. ಈ ವೇಳೆ ಕಾರು ಚಾಲಕ ಟ್ರಕ್ ನ್ನು ಓವರ್ ಟೇಕ್ ಮಾಡಲು ಯತ್ನಿಸಿದಾಗ ಈ ಘಟನೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್ ಪಿಜಿ ಕಿಟ್ ಗೆ ಬೆಂಕಿ ಹೊತ್ತಿಕೊಂಡಿದೆ. ಅಲ್ಲದೇ, ಟ್ರಕ್ ಕೂಡ ಹತ್ತಿ ತುಂಬಿಕೊಂಡು ತೆರಳುತ್ತಿತ್ತು. ಹೀಗಾಗಿಯೇ ಇನ್ನೂ ಹೆಚ್ಚಿನ ಬೆಂಕಿ ಆವರಿಸುವಂತಾಗಿದೆ. ಹೆಚ್ಚಿನ ಬೆಂಕಿ ಆವರಿಸುತ್ತಿದ್ದಂತೆ ಕಾರಿನಲ್ಲಿದ್ದವರಿಗೆ ಹೊರ ಬರಲು ಆಗದೆ, ಸಜೀವವಾಗಿ ದಹನಗೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ತರಲು ಯತ್ನಿಸಿದರಾದರೂ ಅಷ್ಟರಲ್ಲಿ ಕಾರಿನಲ್ಲಿದ್ದವರು ಸುಟ್ಟು ಕರಕಲಾಗಿದ್ದಾರೆ.