ಶಿವಮೊಗ್ಗ: ಹುಂಡೈ ಕಾರು ಶೋ ರೂಮ್ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಈ ಘಟನೆ ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರು ಶೋರೂಮ್ ನಲ್ಲಿ ನಡೆದಿದೆ. ಬೆಂಕಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಶೋ ರೂಮ್ ನಲ್ಲಿದ್ದ ಕೆಲವು ಕಾರುಗಳು ಹಾಗೂ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.








