ಕುಟುಂಬವೊಂದು ತೆರಳುತ್ತಿದ್ದ ಕಾರು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ನಡೆದಿದೆ. ಕಾರು 400 ಅಡಿ ಆಳದ ಕಮರಿಗೆ ಬಿದ್ದಿದ್ದರಿಂದ ದಂಪತಿ ಹಾಗೂ ಮೂರು ತಿಂಗಳ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ತುಲ್ಲಿಯಿಂದ ಚಸ್ಸಾನಾಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿ ತಿಳಿಸಿದ್ದಾರೆ.
ರಕ್ಷಣಾ ಸಿಬ್ಬಂದಿ ಹರಸಾಹಸ ಪಟ್ಟು ಶವಗಳನ್ನು ಹೊರ ತೆಗಿದ್ದಾರೆ. ಗಾಯಗೊಂಡ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.








