ಕಾರೊಂದು ದೊಡ್ಡದಾದದ ಕಂದಕಕ್ಕೆ ಬಿದ್ದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರು ಥಾತ್ರಿಯಿಂದ ಕಥಾವಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಕೂಡಲೇ ರಕ್ಷಣಾ ಕಾರ್ಯ ನಡೆಸಿತ್ತಾದರೂ ಐವರು ಸಾವನ್ನಪ್ಪಿದ್ದಾರೆ. ಅಲ್ಲದೇ, ಇನ್ನೂ ಐವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.