ಚರಂಡಿಗೆ ಕಾರು ಬಿದ್ದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಉತ್ತರ ಪ್ರದೇಶ (Uttar Pradesh)ದಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಮದುವೆ ಸಮಾರಂಭ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಈ ವೇಳೆ 6 ಜನ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಸಿಕಂದರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಜಗನ್ನಾಥಪುರ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ.
ಸಾವನ್ನಪ್ಪಿದ 6 ಜನರನ್ನು ಉತ್ತರ ಪ್ರದೇಶದ ದೇರಾಪುರ ಹಾಗೂ ಶಿವರಾಜಪುರ ನಿವಾಸಿಗಳು ಎಂದು ಗುರುತಿಸಲಾಗಿದೆ.