ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರು ಮತ್ತು ಪ್ರಾಂಶುಪಾಲರಿಂದಲೇ ಅತ್ಯಾಚಾರ
ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮತ್ತು ಕಿರುಕುಳ ನೀಡಿದ ಆರೋಪದಲ್ಲಿ ಒಂಬತ್ತು ಶಿಕ್ಷಕರು ಮತ್ತು ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಗಳು ಶಾಲೆಗೆ ಏಕೆ ಹೋಗುತ್ತಿಲ್ಲ ಎಂದು ಸಂತ್ರಸ್ತೆಯ ತಂದೆ ವಿಚಾರಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. 10 ನೇ ತರಗತಿ ವಿದ್ಯಾರ್ಥಿನಿ, ತನ್ನ ಶಾಲೆಯ ಪ್ರಾಂಶುಪಾಲರು ಮತ್ತು ಇತರ ಮೂವರು ಶಿಕ್ಷಕರಿಂದ ಒಂದು ವರ್ಷದಿಂದ ಸಾಮೂಹಿಕ ಅತ್ಯಾಚಾರವೆಸಗುತ್ತಿದ್ದಾರೆ ಎಂದು ಆರೋಪಿಸಿದ್ದಾಳೆ, ಇಬ್ಬರು ಮಹಿಳಾ ಶಿಕ್ಷಕರು ಕೃತ್ಯದ ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಆರೋಪಿಸಿದ್ದಾಳೆ.
ಮಂಧಾನ ಪೊಲೀಸ್ ಠಾಣಾಧಿಕಾರಿ ಮುಖೇಶ್ ಯಾದವ್ ಮಾತನಾಡಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಮೂರು ಬೇರೆ ಬೇರೆ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಪೊಲೀಸ್ ತನಿಖೆಯ ಸಮಯದಲ್ಲಿ, 6 ನೇ ತರಗತಿ, 4 ನೇ ತರಗತಿ ಮತ್ತು 3 ನೇ ತರಗತಿಯಲ್ಲಿ ಓದುತ್ತಿರುವ ಇನ್ನೂ ಮೂವರು ಬಾಲಕೀಯರು ಮುಂದೆ ಬಂದು ಪ್ರಾಂಶುಪಾಲರು ಮತ್ತು ಶಿಕ್ಷಕರ ಮೇಲೆ ಅತ್ಯಾಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು ಹೇಳಿದ್ದಾರೆ.
ತನಿಖೆಯ ನಂತರ, ಅಲ್ವಾರ್‌ನ ಸರ್ಕಾರಿ ಶಾಲೆಯ ಶಾಲೆಯ ಪ್ರಾಂಶುಪಾಲರು ಮತ್ತು ಒಂಬತ್ತು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.








