ಜನರಲ್ ಬಿಪಿನ್ ರಾವತ್ ಕುರಿತು ವಿಕೃತ ಪೋಸ್ಟ್ – FIR ದಾಖಲು….
ಮಂಗಳೂರು: ಜನರಲ್ ಬಿಪಿನ್ ರಾವತ್ ಅವರು ಮೃತಪಟ್ಟಿದ್ದಕ್ಕೆ ಅವಹೇಳನಕಾರಿ ಬರಹ ಪ್ರಕಟಿಸಿದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ ಬುಕ್ ನಲ್ಲಿ ವಿಕೃತ ಪೋಸ್ಟ್ ಮಾಡಿದ್ದರು ಎನ್ನುವ ಕಾರಣಕ್ಕೆ ಪ್ರಕರಣ ದಾಖಲಾಗಿದ್ದು, ಇವರಲ್ಲಿ ಒಬ್ಬರು ಕಾರ್ಕಳ ಮೂಲ, ಇನ್ನೊಬ್ಬ ಬೆಂಗಳೂರು, ಮತ್ತೊಂದು ಪೋಸ್ಟ್ ಮಾಡಿದ್ದವರ ಮಾಹಿತಿ ಸಿಕ್ಕಿಲ್ಲ ಅಂತ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಸಎಂ ಬಸವರಾಜ ಬೊಮ್ಮಾಯಿ ಸೂಚಿಸಿದ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಸದ್ಯ 3 ಫೇಸ್ಬುಕ್ ಪೋಸ್ಟ್ಗಳ ಮೇಲೆ ಪ್ರಕರಣ ದಾಖಲಾಗಿದೆ.ಬಿಪಿನ್ ರಾವತ್ ಸಾವಿನ ಬಗ್ಗೆ ಪ್ರಚೋದನಕಾರಿಯಾಗಿ ಬರೆದಿದ್ದಾರೆ ಅಂತ ದೂರು ಬಂದ ಹಿನ್ನೆಲೆ ಕೇಸು ದಾಖಲಿಸಿದ್ದೇವೆ. ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ವಿಚಾರಣೆ ಬಳಿಕ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬಿಪಿನ್ ರಾವತ್ ಅವರ ಅಕಾಲಿಕ ಸಾವು, ದೇಶಕ್ಕೆ ಭರಿಸಲಾಗದ ಅತಿ ದೊಡ್ಡ ನಷ್ಟ. ರಾವತ್ ಅವರು ದೇಶಕ್ಕೆ ಸಲ್ಲಿಸಿರುವ ಸೇವೆ ಅಸಾಧಾರಣ ಮತ್ತು ಅವರ ಬಗ್ಗೆ ವಿಕೃತ ಫೋಸ್ಟ್ ಮಾಡುವುದನ್ನು ಸಹಿಸುವುದಿಲ್ಲ ಅಂತವರನ್ನು ದೇಶ ವಿರೋಧಿಗಳು ಎಂದು ಗುರುತಿಸಿ ಅವರಿಗೆ ಶಿಕ್ಷೆಯಾಗಬೇಕು ಎಂದು ತಿಳಿಸಿದ್ದಾರೆ. ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಂತ ದೂರವಾಣಿ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಡಿಜಿಪಿಗೆ ಸೂಚನೆ ನೀಡಿದ್ದಾರೆ.