ಮುಂಬೈ: ನಗರದ ಘಾಟ್‌ಕೋಪರ್ (Ghatkopar) ಪ್ರದೇಶದಲ್ಲಿ ಜಾಹೀರಾತು ನಾಮಫಲಕ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆ ಕಂಡಿದೆ.
ಬೃಹತ್ ಹೋರ್ಡಿಂಗ್ ಕುಸಿತವಾಗಿ (Hoarding Collapse) ಅದರಡಿ ಬಹಳಷ್ಟು ಜನರು ಸಿಲುಕಿದ್ದರು. ಘಟನೆಯ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವು ಹೋರ್ಡಿಂಗ್ ಕುಸಿದ ಸ್ಥಳಕ್ಕೆ ತಲುಪಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು (Rescue Operation) ಆರಂಭಿಸಿತು. ಸದ್ಯ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 70 ಜನ ಗಾಯಗೊಂಡಿದ್ದಾರೆ.
120 x 120 ಅಡಿ ಅಳತೆಯ ಹೋರ್ಡಿಂಗ್ ಪೆಟ್ರೋಲ್ ಪಂಪ್ ಮೇಲೆ ಬಿದ್ದಿದೆ. 100 ಅಡಿ ಎತ್ತರದ ಜಾಹೀರಾತು ಫಲಕ ಬಿದ್ದಿದ್ದರಿಂದ ಸಾವಿನ ಸಂಖ್ಯೆ 14ಕ್ಕೆ ಏರಿದೆ ಮತ್ತು 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಲ್ಲದೇ, ಇಲ್ಲಿಯವರೆಗೆ 88 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 31 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸುಮಾರು 80 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.