ಮಂಡ್ಯ: ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿರುವ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದ ಮಾಡಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಅಮಾನತು ಆಗಿದ್ದಾರೆ.
ಜಿಲ್ಲೆಯ ನಾಗಮಂಗಲದ ಬೆಳ್ಳೂರು (Belluru) ಪಟ್ಟಣದಲ್ಲಿ ಹಿಂದೂ ಯುವಕನ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರು ಹಲ್ಲೆ ಮಾಡಿರುವ ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಹಿಂದೂ ಯುವಕ ದೂರು ನೀಡಿದರೂ, ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳ್ಳೂರು ಠಾಣೆಯ ಪಿಎಸ್ ಐ ಬಸವರಾಜ ಚಿಂಚೋಳಿಯನ್ನು ಅಮಾನತು ಮಾಡಲಾಗಿದೆ. ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಮಂಡ್ಯ ಎಸ್ಪಿ ಎನ್.ಯತೀಶ್ ಅಮಾನತು ಆದೇಶ ಹೊರಡಿಸಿದ್ದಾರೆ.
ಬೈಕ್ ಗೆ ಟಚ್ ಮಾಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಅಭಿಲಾಷ್ ಎಂಬವನ ಮೇಲೆ ಹಲ್ಲೆ ನಡೆದಿತ್ತು. ಈ ಬಗ್ಗೆ ದೂರು ಸ್ವೀಕರಿಸದೆ ಪಿಎಸ್‌ಐ ಬಸವರಾಜ ಚಿಂಚೋಳಿ ನಿರ್ಲಕ್ಷ್ಯ ತೋರಿದ್ದರು ಎಂದು ಆರೋಪ ಕೇಳಿ ಬಂದಿತ್ತು. ದೂರು ಸ್ವೀಕರಿಸದ ನಂತರ ಅಭಿಲಾಷ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೆಲ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಲಾಗಿದೆ ಎಂದು ಸ್ಥಳೀಯರು ಆರೋಪಿದ್ದಾರೆ. ನಂತರ ಪ್ರಕರಣದ ಗಂಭೀರತೆ ಅರಿತು ಪೊಲೀಸರು ಈ ಕುರಿತು ದೂರು ಸ್ವೀಕಾರ ಮಾಡಿದ್ದಾರೆ. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿದ್ದು, ಈ ಹಿಂದೆ ದೂರು ಸ್ವೀಕರಿಸದ ಪಿಎಸ್ ಐ ವಿರುದ್ಧವೂ ದೂರು ನೀಡಲಾಗಿತ್ತು.