ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಈಗಾಗಲೇ ಜೈಲಿನಲ್ಲಿದ್ದಾರೆ. ಇಂದು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿದ್ದರಿಂದಾಗಿ ಮತ್ತೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಆ.28 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಅಲ್ಲದೇ, ಈ ಸಂದರ್ಭದಲ್ಲಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ನ್ಯಾಯಾಧೀಶರಾದ ವಿಶ್ವನಾಥ್ ಸಿ ಗೌಡರ್ ಅವರು ದರ್ಶನ್ ಮತ್ತು ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.