ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ – bjp ಶಾಸಕರ ಮೇಲೆ ಕೇಸ್
ರಾಜಸ್ಥಾನದ ಗೋಗುಂಡಾ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್ ಭಿಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಮದುವೆಯ ನೆಪದಲ್ಲಿ ಮಹಿಳೆಯರ ಮೇಲೆ ಶಾಸಕ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ನೀಡಿದ್ದಾರೆ.
10 ತಿಂಗಳಲ್ಲಿ ಎರಡನೇ ಬಾರಿಗೆ ಶಾಸಕ ಪ್ರತಾಪ್ ಭಿಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಎರಡೂ ಪ್ರಕರಣಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಮದುವೆಯ ನೆಪದಲ್ಲಿ ಮಹಿಳೆಯರ ಮೇಲೆ ಶಾಸಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಹೊಸ ಪ್ರಕರಣವೊಂದರಲ್ಲಿ, ಮಹಿಳೆಯೊಬ್ಬರು ಅಂಬಾಮಾತೆಯ ಪೊಲೀಸ್ ಅಧೀಕ್ಷಕರನ್ನು ಸಂಪರ್ಕಿಸಿ “ಪ್ರತಾಪ್ ಭಿಲ್ ಉದ್ಯೋಗದ ಭರವಸೆ ಮತ್ತು ಮದುವೆಯ ನೆಪದಲ್ಲಿ ಮೇಲೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ” ಎಂದು ಆರೋಪಿಸಿದ್ದಾರೆ.
10 ತಿಂಗಳ ಹಿಂದೆ ಸುಖೇರ್ನಲ್ಲಿ ಶಾಸಕರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಿಐಡಿ ತನಿಖೆ ನಡೆಯುತ್ತಿದೆ. ಈ ವೇಳೆ ಪ್ರತಾಪ್ ಭಿಲ್ ಭೇಟಿಯಾದ ಬಳಿಕ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಅಂದಿನಿಂದ ಆತ ತನಗೆ ಕರೆ ಮಾಡುತ್ತಲೇ ಇದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಉದಯಪುರದ ಸುಖೇರ್ ಮತ್ತು ನೀಮುಚ್ನಲ್ಲಿರುವ ಫ್ಲ್ಯಾಟ್ನಲ್ಲಿ ಶಾಸಕರು ತಮ್ಮೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದರು ಎಂದು ಮಹಿಳೆ ಹೇಳಿದ್ದಾರೆ. ಕೆಲ ದಿನಗಳ ನಂತರ ಶಾಸಕರು ಮದುವೆಯಿಂದ ಹಿಂದೆ ಸರಿದಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಇದಾದ ಬಳಿಕ ಆಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿ ಸತ್ಯವೀರ್ ಸಿಂಗ್ ಮುಂದೆ ಹಾಜರಾಗಿದ್ದರು. ದೂರುದಾರ ಮಹಿಳೆ ಈಗಾಗಲೇ ಮದುವೆಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.