ಬೆಂಗಳೂರು: ಶಾಸಕ ಮುನಿರತ್ನ ಅವರು ಈಗಾಗಲೇ ಬಿಬಿಎಂಪಿ (BBMP) ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಎದುರಿಸುತ್ತಿದ್ದಾರೆ. ಈ ಮಧ್ಯೆ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ (Kaggalipura Police Station) ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಗ್ಗಲೀಪುರದ ಖಾಸಗಿ ರೆಸಾರ್ಟ್ ನಲ್ಲಿ (Private Resort) ಅತ್ಯಾಚಾರ ನಡೆದಿರುವುದಾಗಿ ಎಫ್ ಐಆರ್ ನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ.
ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರಕ್ಕೆ (ಇಂದು) ಕಾಯ್ದಿರಿಸಿದೆ. ಈ ಮಧ್ಯೆ ಶಾಸಕರಿಗೆ ಮತ್ತೊಂದು ಸಂಕಷ್ಟ ಒದಗಿದೆ.